ಬೆಂಗಳೂರು : KSRTC ಬಸ್ – ಕಿಯಾ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ನೇಹಿತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಬರ್ತಿದ್ದ ಬಸ್ಸಿಗೆ ಚಿಕ್ಕಬಳ್ಳಾಪುರದಿಂದ ಬರ್ತಿದ್ದ ಕಾರು ಡಿಕ್ಕಿಯಾಗಿದೆ. ಡಿವೈಡರ್ಗೆ ಕಾರು ಡಿಕ್ಕಿಯಾಗಿ ಎದುರು ಬರ್ತಿದ್ದ KSRTC ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರ ದೇಹಗಳು ಛಿದ್ರ ಛಿದ್ರವಾಗಿದೆ.

ಸಾದಹಳ್ಳಿ ಗ್ರಾಮದ ಮನೋಜ್ ಸೇರಿ ಮತ್ತಿಬ್ಬರು ಸ್ನೇಹಿತರು ಮೃತಪಟ್ಟಿದ್ದಾರೆ. ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇಬ್ಬರು ಹಿರಿಯ IPS ಅಧಿಕಾರಿಗಳ ವರ್ಗಾವಣೆ – ಅಲೋಕ್ ಕುಮಾರ್‌ಗೆ DGP ಪಟ್ಟ, ದಯಾನಂದ್‌ಗೆ ಪೊಲೀಸ್ ತರಬೇತಿ ಕೇಂದ್ರಕ್ಕೆ ನಿಯೋಜನೆ!
Author: Btv Kannada
Post Views: 180







