ಬಾಗಲಕೋಟೆಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆ ದಂಧೆಗೆ ಬ್ರೇಕ್ – ಅಧಿಕಾರಿಗಳಿಂದ ದಿಢೀರ್ ದಾಳಿ.. 10 ಟನ್ ಅಕ್ಕಿ ಜಪ್ತಿ!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಕಳ್ಳಸಾಗಣೆ ಮಾಡುತ್ತಿದ್ದ ದೊಡ್ಡ ದಂಧೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 9 ರಿಂದ 10 ಟನ್ ಪಡಿತರ ಅಕ್ಕಿ ಹಾಗೂ ಕಳ್ಳಸಾಗಣೆಗೆ ಬಳಸುತ್ತಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದೆ.

ಜಮಖಂಡಿ ಟೌನ್‌ನ RTO ಕಚೇರಿ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಈ ಅಕ್ರಮ ಸಂಗ್ರಹಣೆಯನ್ನು ದಂಧೆಕೋರರು ನಡೆಸುತ್ತಿದ್ದರು. ಸರ್ಕಾರದ ಬಡವರ ಪಾಲಿನ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಿತ್ತು.

ಖಚಿತ ಮಾಹಿತಿಯ ಮೇರೆಗೆ ಜಮಖಂಡಿ ಉಪವಿಭಾಗದ ಸಹಾಯಕ ಆಯುಕ್ತರಾದ (AC) ಶ್ವೇತಾ ಬಿಡಿಕರ್ ನೇತೃತ್ವದಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ 9 – 10 ಟನ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕಳ್ಳಸಾಗಣೆಗೆ ಬಳಸಲು ಸಿದ್ಧವಾಗಿದ್ದ ಒಂದು ಲಾರಿಯನ್ನೂ ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆಗೆ ಎಸಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯಾದ್ಯಂತ ‘ಡೆವಿಲ್​’ ಅಬ್ಬರ ಶುರು – ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ.. ಮುಗಿಲುಮುಟ್ಟಿದ ದರ್ಶನ್ ಫ್ಯಾನ್ಸ್​ ಸಂಭ್ರಮ!

Btv Kannada
Author: Btv Kannada

Read More