ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್​​ ಕುಮಾರ್​​ ಅಧಿಕಾರ ಸ್ವೀಕಾರ!

ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ 10:00 ಕ್ಕೆ ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದು, ಬಳಿಕ ಕಾರಾಗೃಹ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

IPS ಅಧಿಕಾರಿ ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಜೊತೆಗೂ ಸಭೆ ನಡೆಸಿ ಇತ್ತೀಚಿನ ಘಟನೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇನ್ನು ಜೈಲಿನ ಅಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ ಸುಧಾರಣೆ ಮುಖ್ಯ. ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಜೈಲಿನ ಒಳಗೆ ಗಾಂಜಾ, ಡ್ರಗ್ಸ್, ಮೊಬೈಲ್ ಒಳಗೆ ಹೋಗಬಾರದು. ಜೈಲಿನಲ್ಲಿ ಮೊಬೈಲ್ ಜಾಮರ್ ಹಾಕಿದ್ರೆ ಜನರಿಗೆ ತೊಂದರೆ ಆಗುತ್ತೆ, ಅದನ್ನ ಮನಗಂಡು ಕೆಲಸ ಮಾಡಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆ ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಯೋಗೇಶ್ ಗೌಡ ಕೊಲೆ ಕೇಸ್ – ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ!

Btv Kannada
Author: Btv Kannada

Read More