ಬೆಳಗಾವಿ : ಸಾಮಾಜಿಕ ಬಹಿಷ್ಕಾರದ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಕುಟುಂಬ, ವ್ಯಕ್ತಿಗೆ ಸಾಮಾಜಿಕವಾಗಿ ಬಹಿಷ್ಕಾರ ಹಾಕುವುದು ಇನ್ಮುಂದೆ ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ನಿಟ್ಟಿನಲ್ಲಿ ಮಹತ್ವದ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ. ಮಸೂದೆಯ ಪ್ರಕಾರ ಸಾಮಾಜಿಕ ಬಹಿಷ್ಕಾರ ಹಾಕಿದರೆ 3 ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಲು ಅವಕಾಶ ಇದೆ.
ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ-2025ನ್ನು ವಿಧಾನಸಭೆಯಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಮಂಡನೆ ಮಾಡಿದರು. ಇದರ ಪ್ರಕಾರ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂಥವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಪಡಿಸುವ ಅವಕಾಶ ಇದೆ.
ಯಾವುದೆಲ್ಲ ನಿಷೇಧ?
- ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು
- ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ
- ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು
- ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು
- ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು
- ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು
- ವಿವಿಧ ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು
- ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸು ವುದಕ್ಕೆ ತಡೆಯೊಡ್ಡುವುದು
- ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು
- ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು
- ಮಾನವ ಹಕ್ಕುಗಳನ್ನು ನಿರಾಕರಿಸುವುದು
- ಲಿಂಗತ್ವ, ವರ್ಣ, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದು.
ಇದನ್ನೂ ಓದಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ – ಸಚಿವ ಡಾ. ಜಿ ಪರಮೇಶ್ವರ್!
Author: Btv Kannada
Post Views: 244







