ಬಾಗಲಕೋಟೆಯಲ್ಲಿ ಭೀಕರ ಸರಣಿ ಅಪಘಾತ – ಒಬ್ಬರ ಸಾವು, ಮೂವರಿಗೆ ಗಂಭೀರ ಗಾಯ!

ಬಾಗಲಕೋಟೆ : ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್, ಗೂಡ್ಸ್ ವಾಹನ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ತುಳಸಿಗೇರಿ ಬಳಿ ಗೂಡ್ಸ್ ವಾಹನವು ಮೊದಲು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಹಿಂದೆಯೇ ಬಂದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ದುರಂತ ಅಪಘಾತದಲ್ಲಿ ಗೂಡ್ಸ್ ವಾಹನದ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರು ಬಂಟನೂರು ಗ್ರಾಮದ ನಿವಾಸಿಗಳು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನೆಲಮಂಗಲ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಾನವ ತಲೆಬುರುಡೆ ಪತ್ತೆ – ಸ್ಥಳೀಯರಿಂದ ಆತಂಕ!

Btv Kannada
Author: Btv Kannada

Read More