ಬೆಂಗಳೂರು : ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಹಾಗೂ ಪದ್ಮಶ್ರೀ ಪುರಸ್ಕೃತ, ಶ್ರೇಷ್ಠ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರಿನ ನಿವಾಸದಲ್ಲಿ ಕಳ್ಳತನ ನಡೆದಿದೆ. ಮನೆಯ ಆವರಣದಲ್ಲಿ ನಡೆದ ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮನೆಯ ಆವರಣದಲ್ಲಿನ ನೀರು ಸಂಗ್ರಹಿಸುವ ಸಂಪ್ (Sump) ನ ಕಬ್ಬಿಣದ ಗಾರ್ಡ್ ಅನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳತನದ ಸಂಪೂರ್ಣ ದೃಶ್ಯಾವಳಿಗಳು ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಮೆಸ್ಸಿ ನೋಡಲು ಬಂದ ಫ್ಯಾನ್ಸ್ ದಾಂಧಲೆ – ಕೋಲ್ಕತ್ತಾ ಸ್ಟೇಡಿಯಂನಲ್ಲಿ ಭಾರೀ ಗಲಾಟೆ!
Author: Btv Kannada
Post Views: 265







