ಬಾಗಲಕೋಟೆಯಲ್ಲಿ KSRTC ಬಸ್‌ನಿಂದ ಭೀಕರ ಅಪಘಾತ – ಇಬ್ಬರಿಗೆ ಗಂಭೀರ ಗಾಯ!

ಬಾಗಲಕೋಟೆ : ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ KSRTC ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವೇಗದ ಬಸ್ ರಸ್ತೆಯಲ್ಲಿದ್ದ ದ್ವಿಚಕ್ರ ವಾಹನಗಳಿಗೆ ಗುದ್ದಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರಿಗೆ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಕನಿಷ್ಠ ಎರಡು ಬೈಕ್‌ಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ವಾಹನಗಳಿಗೆ ಗುದ್ದಿದ ಬಳಿಕವೂ ಬಸ್ ನಿಲ್ಲದೇ ಸಮೀಪದ ಪೆಟ್ರೋಲ್ ಬಂಕ್ ಒಳಗೆ ನುಗ್ಗಿ ನಿಂತಿದೆ. ಅದೃಷ್ಟವಶಾತ್, ಪೆಟ್ರೋಲ್ ಬಂಕ್‌ನಲ್ಲಿ ಭಾರೀ ಅನಾಹುತ ತಪ್ಪಿದೆ. ಅಪಘಾತದಲ್ಲಿ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ತಕ್ಷಣ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಖಾಕಿ ಹಾಕಿ ಮನೆಗೆ ನುಗ್ಗಿದ ನಕಲಿ ಪೊಲೀಸ್ ಗ್ಯಾಂಗ್ – ನಾಲ್ವರು ಅರೆಸ್ಟ್!

Btv Kannada
Author: Btv Kannada

Read More