ಮಡಿಕೇರಿ : ಪ್ರವಾಸಿ ಬಸ್ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.

ವಿರಾಜಪೇಟೆ ಮಾಕುಟ್ಟ ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ನಸುಕಿನ ಜಾವ ತಾಂತ್ರಿಕ ದೋಷದಿಂದ ಏಕಾಏಕಿ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವಘಡದಿಂದ ಕೊಡಗು, ಕೇರಳ, ಮಾಕುಟ್ಟ ರಸ್ತೆಯಲ್ಲಿ ಕೆಲವು ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಇದನ್ನೂ ಓದಿ : ಬೆಂಗಳೂರು 2ನೇ ಏರ್‌ಪೋರ್ಟ್ : ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಸಚಿವ ಎಂ.ಬಿ ಪಾಟೀಲ್!
Author: Btv Kannada
Post Views: 207







