ಹೆಚ್​ಡಿಕೆ ಹುಟ್ಟುಹಬ್ಬದ ಪ್ರಯುಕ್ತ ಟಿ. ದಾಸರಹಳ್ಳಿಯ ವಿಶಾಲ್‌ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ವಿತರಣೆ!

ಬೆಂಗಳೂರು : ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ, ಜೆಡಿಎಸ್‌ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್‌ ಹೆಚ್‌.ಎಸ್‌. ಅವರ ನೇತೃತ್ವದಲ್ಲಿ ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿರುವ ವಿಶಾಲ್‌ ಪಬ್ಲಿಕ್‌ ಶಾಲೆಯ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ವಿತರಣೆ ಮಾಡಲಾಯಿತು.

ಶಾಲಾ ಹಂತದಲ್ಲಿ ಮಕ್ಕಳಿಗೆ ಭಗವದ್ಗೀತೆ ಕಲಿಸಬೇಕು ಎಂಬುದು ಹೆಚ್‌.ಡಿ. ಕುಮಾರಸ್ವಾಮಿ ಅವರ ಆಶಯವಾಗಿದೆ. ಮಕ್ಕಳಿಗೆ ಜ್ಞಾನ, ಮನಸ್ಸಿನ ನಿಯಂತ್ರಣ, ಶಾಂತಿ ಮತ್ತು ನಾಯಕತ್ವ ಬೆಳೆಸಲು ಭಗವದ್ಗೀತೆಯು ಮಾರ್ಗದರ್ಶನ ನೀಡುತ್ತದೆ.

ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕ ಟಿ.ಕೆ. ನರಸೇಗೌಡ ಅವರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಪೊಲೀಸರ ಹಣದ ದಾಹಕ್ಕೆ ಯುವತಿ ಆತ್ಮಹತ್ಯೆಗೆ ಯತ್ನ – ಗಂಭೀರ ಗಾಯ.. ಸಾವು-ಬದುಕಿನ ಮಧ್ಯೆ ಹೋರಾಟ!

Btv Kannada
Author: Btv Kannada

Read More