ಬೆಂಗಳೂರು : ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ RPF ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮೂವರು ಪುಂಡರನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಮೂವರು ಆರೋಪಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್ ಎಳೆದಿದ್ದಾರೆ.
ಚೈನ್ ಎಳೆದಿದ್ದನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಶ್ನೆ ಮಾಡಿದರು. ಈ ವೇಳೆ ಪುಂಡರು ಆರ್‌ಪಿಎಫ್ ಸಿಬ್ಬಂದಿಯನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ. ಕೂಡಲೇ ಹೆಚ್ಚಿನ ಆರ್‌ಪಿಎಫ್ ಸಿಬ್ಬಂದಿ ಸ್ಥಳಕ್ಕೆ ಬಂದು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಯಶವಂತಪುರ ರೈಲ್ವೆ ಠಾಣೆಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ರೈಲಿನ ಚೈನ್ ಎಳೆದು, ರೈಲ್ವೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ : ಹೆತ್ತವಳೇ ಪರಪುರುಷರ ಹಾಸಿಗೆಗೆ ನನ್ನನ್ನ ತಳ್ಳಿದಳು..ಅಮ್ಮಾ..ಅಮ್ಮಾ.. ಅಂದ್ರೂ ಪುಡಿಗಾಸೇ ಅವಳಾಟವಾಯ್ತು..!
Author: Btv Kannada
Post Views: 267







