ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ – ನಾಲ್ವರು ಸಾವು!

ನವದೆಹಲಿ : ಮಥುರಾದ ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್​ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿದ್ದು, ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ ಬಲ್ದೇವ್ ಪೊಲೀಸ್ ಠಾಣೆ ಪ್ರದೇಶದ ಮೈಲ್‌ಸ್ಟೋನ್ 127 ಬಳಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸುಮಾರು 20 ಆಂಬ್ಯುಲೆನ್ಸ್​ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ನಂತರ ಡಿಎಂ ಮತ್ತು ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್, ಅಗ್ನಿಶಾಮಕ ಇಲಾಖೆ, ಎನ್‌ಎಚ್‌ಎಐ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಕೆಲಸ ಮಾಡುತ್ತಿವೆ.

ಇದನ್ನೂ ಓದಿ : ರೈಲಿನ ಚೈನ್ ಎಳೆದು ಪುಂಡಾಟ – ಪ್ರಶ್ನಿಸಿದ RPF ಸಿಬ್ಬಂದಿ ಮೇಲೆ ಹಲ್ಲೆ.. ಮೂವರು ಅರೆಸ್ಟ್!

Btv Kannada
Author: Btv Kannada

Read More