ನ್ಯಾಷನಲ್​ ಹೆರಾಲ್ಡ್ ಕೇಸ್ – ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್!

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ED ಸಲ್ಲಿಸಿದ ಚಾರ್ಜ್‌ಶೀಟ್  ಪರಿಗಣಿಸಲು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ ನಿರಾಕರಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ED ಚಾರ್ಜ್​ಶೀಟ್ ಸಲ್ಲಿಸಿತ್ತು. ಇದೀಗ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಲು ರೌಸ್ ಅವೆನ್ಯೂ ನ್ಯಾಯಾಲಯವು ನಿರಾಕರಿಸಿದ್ದು, ಇಡಿಯ ತನಿಖೆಯನ್ನು ಮುಂದುವರೆಸಲು ಕೋರ್ಟ್ ಅನುಮತಿ ನೀಡಿದೆ.

ಖಾಸಗಿ ವ್ಯಕ್ತಿ ದೂರು ನೀಡಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗಾನೆ ತಿಳಿಸಿದ್ದು, ಈ ಮೂಲಕ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ : ಪರಪ್ಪನ ಅಗ್ರಹಾರಕ್ಕೆ ನೂತನ DGP ಅಲೋಕ್ ಕುಮಾರ್ ಭೇಟಿ – ಅಧಿಕಾರಿಗಳಿಗೆ ಖಡಕ್ ಕ್ಲಾಸ್!

Btv Kannada
Author: Btv Kannada

Read More