ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ʼ45ʼ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಟ್ರೈಲರ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಿಯಲ್ ಸ್ಟಾರ್ ಉಪೆಂದ್ರ ಅಂತೂ ಮಾಸ್ ಡೈಲಾಗ್ ಮೂಲಕವೇ ಅಬ್ಬರಿಸಿದ್ದಾರೆ. ಅದರಲ್ಲೂ ಶಿವಣ್ಣ ಹಿಂದೆಂದೂ ಕಂಡಿರದ ಲುಕ್‌ನಲ್ಲಿ ಮಿಂಚಿದ್ದಾರೆ.

ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದ್ದು, ಶಿವಣ್ಣನ ಲೇಡಿ ಗೆಟಪ್ ಅವತಾರ ಇನ್ನಷ್ಟು ಕುತೂಹಲ ಮೂಡಿಸಿದೆ. ರಾಜ್ ಬಿ ಶೆಟ್ಟಿ, ಶಿವರಾಜ್ಕುಮಾರ್ ಹಾಗೂ ಉಪೇಂದ್ರ ಪಾತ್ರಗಳು ಟ್ರೇಲರ್ನಲ್ಲಿ ಹೈಲೈಟ್ ಆಗಿವೆ. ಗೋರಿ ಮೇಲೆ ಹುಟ್ಟಿದ ದಿನಾಂಕ, ಹಾಗೂ ಸಾಯುವ ದಿನಾಂಕ ಬರೆದಿರುತ್ತಾರೆ. ಮಧ್ಯದಲ್ಲಿ ಒಂದು ಸಣ್ಣ ಗೆರೆ ಇರುತ್ತೇ. ಅದುವೇ ಜೀವನ ಎಂದು ಉಪ್ಪಿ ಹೇಳುವ ಡೈಲಾಗ್ ಗಮನ ಸೆಳೆದಿದೆ. ಟ್ರೇಲರ್ ಕೊನೆಯಲ್ಲಿ ಶಿವರಾಜ್ಕುಮಾರ್ ತಾಳುವ ಅವತಾರ ಭಾರೀ ಮೆಚ್ಚುಗೆ ಪಡೆದಿದೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ʼಸೂರಜ್ ಪ್ರೊಡಕ್ಷನ್ʼ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ 45 ಡಿಸೆಂಬರ್ 25ಕ್ಕೆ ದೇಶಾದ್ಯಂತ, ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 13 ದಿನ ಮುನ್ನ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಈಗಾಗಲೇ ’45’ ಚಿತ್ರದ ಟೀಸರ್ ಹಾಗೂ ಪ್ರಮೋಷನಲ್ ಸಾಂಗ್ ಹಿಟ್ ಆಗಿದ್ದು, ಬಹಳ ವರ್ಷಗಳ ಬಳಿಕ ಮತ್ತೆ ಶಿವಣ್ಣ, ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ.
ಸತ್ಯ ಹೆಗಡೆ ಛಾಯಾಗ್ರಹಣ, ಕೆ. ಪ್ರಕಾಶ್ ಸಂಕಲನ ’45’ ಚಿತ್ರಕ್ಕಿದೆ. ಸ್ವತಃ ಅರ್ಜುನ್ ಜನ್ಯಾ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದಾರೆ. 5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ’45’ ಸಿನಿಮಾ ಬಿಡುಗಡೆ ಆಗಲಿದೆ.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿ ಲೋಕಾಯುಕ್ತ – ವಿಜಯನಗರ DHO ಕಚೇರಿ, ಮನೆ, ಆಸ್ಪತ್ರೆ ಮೇಲೆ ರೇಡ್!







