ಕಲಬುರಗಿ : ಕಬ್ಬಿನ ಟ್ರಾಕ್ಟರ್ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ನಡೆದಿದೆ.

ಟ್ರಾಕ್ಟರ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಗಾಯಾಳುಗಳನ್ನು ಜೇವರ್ಗಿ ಹಾಗೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ನ್ಯೂ ಇಯರ್ ಸೆಲೆಬ್ರೇಷನ್ಗೆ ಹೊಸ ರೂಲ್ಸ್ – ಪಬ್, ಕ್ಲಬ್, ಹೋಟೆಲ್ಗಳಿಗೆ ಮಾರ್ಗಸೂಚಿ ಬಿಡುಗಡೆ!
Author: Btv Kannada
Post Views: 157







