ಪ್ರಧಾನಿ ಮೋದಿಗೆ ಮತ್ತೊಂದು ಅಂತರಾಷ್ಟ್ರೀಯ ಗೌರವ – ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ!

ಪ್ರಧಾನಿ ನರೇಂದ್ರ ಮೋದಿ ಅವರ ಜಾಗತಿಕ ಜನಪ್ರಿಯತೆ ಮತ್ತು ರಾಜತಾಂತ್ರಿಕತೆಗೆ ಮತ್ತೊಂದು ಪ್ರತಿಷ್ಠಿತ ಗೌರವ ಲಭಿಸಿದೆ. ತಮ್ಮ ಎರಡು ದಿನಗಳ ಇಥಿಯೋಪಿಯಾ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರೇಟ್ ಆನರ್ ನಿಶಾನ್ ನೀಡಿ ಸನ್ಮಾನಿಸಲಾಗಿದೆ.

ಇಥಿಯೋಪಿಯಾ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಅವರು ವೈಯಕ್ತಿಕವಾಗಿ ಈ ಉನ್ನತ ಗೌರವವನ್ನು ಪ್ರಧಾನಿ ಮೋದಿಯವರಿಗೆ ನೀಡಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಈ ಗೌರವ ಲಭಿಸಿರುವುದು ಭಾರತ ಮತ್ತು ಇಥಿಯೋಪಿಯಾದ ನಡುವಿನ ಶತಮಾನಗಳಷ್ಟು ಹಳೆಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಮೋದಿ ಅವರ ಸಕ್ರಿಯ ಜಾಗತಿಕ ರಾಜತಾಂತ್ರಿಕತೆ ಮತ್ತು ವಿಶ್ವ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವದೊಂದಿಗೆ, ಪ್ರಧಾನಿ ನರೇಂದ್ರ ಮೋದಿಯವರು ಇದುವರೆಗೂ ಒಟ್ಟು 28 ಅಂತರರಾಷ್ಟ್ರೀಯ ಗೌರವಗಳ ಗರಿ ಮುಡಿಗೇರಿಸಿಕೊಂಡಿದ್ದಾರೆ.

ಇದನ್ನೂ ಓದಿ : ಟ್ರಾಕ್ಟರ್-ಬಸ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿಗೆ ಗಂಭೀರ ಗಾಯ!

Btv Kannada
Author: Btv Kannada