ಬೆಂಗಳೂರು : ಇಂದು ಬೆಳ್ಳಂಬೆಳಿಗ್ಗೆ KRIDL ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಕಾಂಟ್ರ್ಯಾಕ್ಟರ್ಗಳಿಂದ 5 ಕೋಟಿ ಹಣ ಪಡೆದಿರುವ ಆರೋಪ ಕೇಳಿಬಂದ ಹಿನ್ನೆಲೆ KRIDL ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.

KRIDL ಕಚೇರಿ ವಿರುದ್ಧ ಹಣ ದುರ್ಬಳಕೆ, ಕಳಪೆ ಕಾಮಗಾರಿ ಹೀಗೆ ಸಾಕಷ್ಟು ದೂರುಗಳು ಲೋಕಾಯುಕ್ತಕ್ಕೆ ಬಂದಿದ್ದವು. ಹಾಗಾಗಿ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ KRIDL ಕಚೇರಿ ಮೇಲೆ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ರಾಮಮೂರ್ತಿನಗರ ಇನ್ಸ್ಪೆಕ್ಟರ್ ಸತೀಶ್.Jಗೆ ಲವ್ ಕಾಟ – ಹನಿಟ್ರ್ಯಾಪ್ ಲೇಡಿ ಸಂಜನಾಗೆ ಜೈಲೂಟ!
Author: Btv Kannada
Post Views: 197







