ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆಗಾಗಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಭಾರತ ಸರ್ಕಾರಕ್ಕೆ ಮನವಿಸಿದ ಅದ್ದೂರಿ ಕಾರ್ಯಕ್ರಮ!

ದೆಹಲಿ ಕರ್ನಾಟಕ ಸಂಘದ ಜನಸ್ನೇಹಿ ಜನಾನುರಾಗಿ ಅಧ್ಯಕ್ಷರಾದ ಶ್ರೀ ಸಿ.ಎಂ ನಾಗರಾಜ್ ಅವರು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿಸಿ ರಾಷ್ಟ್ರಮಟ್ಟದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ ಮತ್ತು ಇಂತಹದೇ ಇತಿಹಾಸ ಸೃಷ್ಟಿ ಮಾಡುವ ಸಾಲಿಗೆ ಸೇರುವಂತಹ ಕಾರ್ಯಕ್ರಮ ಮನುಜ ಮತ ವಿಶ್ವ ಪಥ ಎಂದು ಸಾರಿದ ಪದ್ಮವಿಭೂಷಣ ಹಾಗೂ ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಸಾದನೆ ಕೊಡುಗೆ ಕುರಿತು ವಿಚಾರ ಸಂಕೀರ್ಣವನ್ನು ದಿನಾಂಕ 17/12/2025 ರಂದು ದೆಹಲಿ ಕರ್ನಾಟಕ ಸಂಘದಲ್ಲಿ ಬಹು ಅರ್ಥಪೂರ್ಣವಾದ ಮತ್ತು ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮವು ರಾಷ್ಟ್ರಕವಿ ಕುವೆಂಪು ಅವರ ಶ್ರೇಷ್ಠ ಸಾದನೆ ಮತ್ತು ಅತ್ಯುನ್ನತ ಕೊಡುಗೆಗಳಿಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಭಾರತ ಸರ್ಕಾರಕ್ಕೆ ಮನವಿ ಮಾಡುವ ಸದುದ್ದೇಶದಿಂದ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಪೀಠಾಧ್ಯಕ್ಷರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ನಾಗಮಂಗಲ ಇವರು ಮಾಡಿದರು ಮತ್ತು ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿ ಮಠ ರಸ್ತೆ ಕಾಟನ್ ಪೇಟೆ ಬೆಂಗಳೂರು ಮತ್ತು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿಯವರು ಪೀಠಾಧ್ಯಕ್ಷರು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಬೆಂಗಳೂರು, ಶ್ರೀ ಶ್ರೀ ಮುಕ್ತಿದಾನಂದ ಜಿ ಮಹಾರಾಜ್ ರವರು ಅಧ್ಯಕ್ಷರು ಶ್ರೀರಾಮಕೃಷ್ಣ ಆಶ್ರಮ ಮೈಸೂರು ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ. ನಂಜಾವದೂತ ಮಹಾ ಸ್ವಾಮೀಜಿ ಅವರು ಪೀಠಾಧ್ಯಕ್ಷರು ಸ್ಪಟಿಕಪುರಿ ಮಹಾಸಂಸ್ಥಾನ ಮಠ ಶಿರಾ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಯವರು ಮಾದರ ಚೆನ್ನಯ್ಯ ಗುರುಪೀಠ ಚಿತ್ರದುರ್ಗ, ಸನ್ಮಾನ್ಯ ಶ್ರೀ ಬಿ.ಎಲ್ ಸಂತೋಷ್ ಜಿ ರವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಭಾರತೀಯ ಜನತಾ ಪಕ್ಷ ನವ ದೆಹಲಿ, ಸನ್ಮಾನ್ಯ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ರವರು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರು ಭಾರತ ಸರ್ಕಾರ ನವದೆಹಲಿ, ಸನ್ಮಾನ್ಯ ಶ್ರೀ ವಿ ಸೋಮಣ್ಣ ರವರು ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಸಚಿವರು ಭಾರತ ಸರ್ಕಾರ, ಸನ್ಮಾನ್ಯ ಶ್ರೀ ಟಿ.ಬಿ ಜಯಚಂದ್ರ ಅವರು ದೆಹಲಿ ವಿಶೇಷ ಪ್ರತಿನಿಧಿ ಕರ್ನಾಟಕ ಸರ್ಕಾರ, ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರು ಭಾರತ ಸರ್ಕಾರ, ಡಾಕ್ಟರ್ ಸಿ ಸೋಮಶೇಖರ್ ರವರು ಮಾಜಿ ಅಧ್ಯಕ್ಷರು ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಪ್ರೊಫೆಸರ್ ಸಿ ನಾಗಣ್ಣ ರವರು ನಿವೃತ್ತ ನಿರ್ದೇಶಕರು ಪ್ರಸಾರಾಂಗ ಮೈಸೂರು ವಿಶ್ವವಿದ್ಯಾಲಯ ಹಾಗೂ ಶ್ರೀ ಜಯರಾಮ್ ರಾಯಪುರ ರವರು ಐ.ರ್‌.ಎಸ್‌ ಪ್ರಧಾನ ಆಯುಕ್ತರು ಆದಾಯ ತೆರಿಗೆ ಇಲಾಖೆ ಆಂಧ್ರಪ್ರದೇಶ ಭಾರತ ಸರ್ಕಾರ ಮತ್ತು ಸನ್ಮಾನ್ಯ ಶ್ರೀ ಎಚ್ ಕೆ ರಾಮುರವರು ಅಧ್ಯಕ್ಷರು ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮೈಸೂರು ಇವರು ಭಾಗವಹಿಸಿ ಎಲ್ಲರೂ ಒಕ್ಕೊರಲಿನಿಂದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತ ಎಲ್ಲಾ ಸ್ವಾಮೀಜಿಗಳು ಹಾಗೂ ಭಾರತ ಸರ್ಕಾರದ ಮಾನ್ಯ ಸಚಿವರು ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆಗಳ ಬಗ್ಗೆ ಅವರ ಕಾವ್ಯ ಕಥನ ಮತ್ತು ರಾಷ್ಟ್ರಕವಿ ಕುವೆಂಪು ಅವರು ಬರೆದ ಮೇರು ಕೃತಿ ಶ್ರೀ ರಾಮಾಯಣ ದರ್ಶನಂ ಕುರಿತು ಅದ್ಭುತವಾಗಿ ಮಾತನಾಡಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆಗಳ ಬಗ್ಗೆ ಕೇಳುಗರ ಮೈನವಿರೇಳಿಸುವಂತೆ ಅದ್ಭುತವಾಗಿ ಹೇಳದರು.

ಸನ್ಮಾನ್ಯ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರು ಭಾರತ ಸರ್ಕಾರ ನವದೆಹಲಿ ಅವರು ಭಾರತ ಸರ್ಕಾರದ ಪರವಾಗಿ ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ದೆಹಲಿ ಕರ್ನಾಟಕ ಸಂಘದ ಪರವಾಗಿ ನೆರೆದಿದ್ದ ಎಲ್ಲಾ ಮುಖ್ಯ ಅತಿಥಿಗಳಿಂದ ಮಾಡಿದ ಮನವಿಯನ್ನು ಸ್ವೀಕರಿಸಿ ಅವರು ಸಹ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ತುಂಬಾ ಅಗಾಧವಾದ ಭಾಷಣ ಮಾಡಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ತಾವು ಸಹ ಭಾರತ ಸರ್ಕಾರಕ್ಕೆ ಮನವಿ ಮಾಡುವುದಾಗಿ ಆಶ್ವಾಸನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಬಗ್ಗೆ ಒಂದು ಕಿರು ಚಿತ್ರವನ್ನು ಹಾಗೂ ಸಾಹಿತಿ ಚದುರಂಗ ರವರು ರಚಿಸಿ ನಿರ್ದೇಶಿಸಿದಂತ ಒಂದು ಸಾಕ್ಷ್ಯಚಿತ್ರ ವನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ, ಮಂಡ್ಯದಿಂದ ಮತ್ತು ದೆಹಲಿಯ ಸ್ಥಳೀಯ ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಈ ಕಾರ್ಯಕ್ರಮವನ್ನು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮೈಸೂರು ಹಾಗೂ ದೆಹಲಿ ಕರ್ನಾಟಕ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ದಿನರಾತ್ರಿ ಎನ್ನದೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಲು ಎಲ್ಲರನ್ನೂ ಒಗ್ಗೂಡಿಸಿ ಈ ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅವರೇ ಕಾರಣಿಕರ್ತರಾಗಿದ್ದಾರೆ. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸಿಎಂ ನಾಗರಾಜ್ ಅವರು ಸ್ವಾಗತ ಭಾಷಣವನ್ನು ಮಾಡಿದರು ಮತ್ತು ಈ ಕಾರ್ಯಕ್ರಮದ ನಿರೂಪಣೆಯನ್ನು ದೆಹಲಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಕೆ.ಎಸ್ ಮೂರ್ತಿ ಅವರು ಮಾಡಿದರು.

ಇದನ್ನೂ ಓದಿ : ಕಂದಾಯ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ – ಕಾವೇರಿ-2 ಮತ್ತು ಇ-ಸ್ವತ್ತು ಲಿಂಕ್ ಸಮಸ್ಯೆಗೆ ಶೀಘ್ರವೇ ಮುಕ್ತಿ!

Btv Kannada
Author: Btv Kannada