ಕ್ಯಾಂಟರ್‌ಗೆ ಗುದ್ದಿದ ಗ್ರಾಂಡ್ ವಿಟಾರಾ – ಕಾರು ಚಾಲಕನ ಪತ್ನಿ ಸ್ಥಿತಿ ಗಂಭೀರ!

ತುಮಕೂರು : ತುಮಕೂರು ಜಿಲ್ಲೆಯ ದೇವರಹಳ್ಳಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಗ್ರಾಂಡ್ ವಿಟಾರಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಪುಡಿಯಾಗಿದೆ.

ಕಾರು ಚಾಲಕ ದೇವರಾಜು ಅವರ ಪತ್ನಿಗೆ ಅಪಘಾತದಲ್ಲಿ ತೀವ್ರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ತಾವರೆಕೆರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ದ್ವೇಷ ಭಾಷಣ ತಡೆ ವಿಧೇಯಕ ಮಂಡನೆ ವೇಳೆ ‘ಭೈರತಿ’ ಕಿಡಿ – ಸದನದ ಬಾವಿಗಿಳಿದು ಬಿಜೆಪಿ ಧರಣಿ!

Btv Kannada
Author: Btv Kannada

Read More