ವಿಜಯನಗರ : ಮರಿಯಮ್ಮನಹಳ್ಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಸುನೀತಾ, ವೈದ್ಯಾಧಿಕಾರಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ವೈದ್ಯಾಧಿಕಾರಿ ಡಾ. ಮಂಜುಳಾ ಅವರ ನಿರಂತರ ಕಿರುಕುಳಕ್ಕೆ ಬೇಸತ್ತ ನರ್ಸ್ ಸುನೀತಾ ಆಸ್ಪತ್ರೆಯಲ್ಲೇ ಸುಮಾರು 20ಕ್ಕೂ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ಸುನೀತಾ ಅವರನ್ನು ಹೊಸಪೇಟೆಯ ನೂರು ಹಾಸಿಗೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಾ. ಮಂಜುಳಾ ಅವರು ಕೇವಲ ಸುನೀತಾ ಮಾತ್ರವಲ್ಲದೆ, ಆಸ್ಪತ್ರೆಯ ಎಲ್ಲಾ ನರ್ಸ್‌ಗಳಿಗೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ನಾಲ್ಕನೇ ಮಹಡಿಯಿಂದ ಬಿದ್ದ ಸಿಮೆಂಟ್ ಇಟ್ಟಿಗೆ – 4 ವರ್ಷದ ಮಗು ಸಾವು!
Author: Btv Kannada
Post Views: 249







