ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿ : ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರಿದ್ದ ಕಾರು ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸವದತ್ತಿ ಬಳಿ ನಡೆದಿದೆ.

ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ(30) ಮೃತ ದುರ್ದೈವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಈ ವೇಳೆ ಕಾರು ಗುದ್ದಿ ಮಂಜುನಾಥ್ ತಲೆ ಭಾಗಕ್ಕೆ ಗಂಭೀರಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಕಾರು ಪಲ್ಟಿಯಾಗಿದೆ.

ಇದನ್ನೂ ಓದಿ : ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪ – RTO ಕಮಿಷನರ್ ಯೋಗೇಶ್ ವಿರುದ್ಧ FIR!

Btv Kannada
Author: Btv Kannada

Read More