ಬೆಂಗಳೂರು : ರೌಡಿಶೀಟರ್ ಬಿಕ್ಲ ಶಿವನ ಹತ್ಯೆ ಕೇಸ್ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹಿನ್ನೆಲೆ ಭೈರತಿ ಬಸವರಾಜ್ಗೆ ಬಂಧನ ಭೀತಿ ಎದುರಾಗಿದೆ. ಇದೀಗ ಶಾಸಕ ಭೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ವಿಶೇಷ ತಂಡ ರಚನೆಯಾಗಿದ್ದು, ಯಾವುದೇ ಕ್ಷಣದಲ್ಲಿ ಭೈರತಿ ಬಸವರಾಜ್ ಅರೆಸ್ಟ್ ಆಗುವ ಸಾಧ್ಯತೆಯಿದೆ.

ಬಿಕ್ಲ ಶಿವ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಆರೋಪಿಗಳ ಕಸ್ಟಡಿಯಲ್ ವಿಚಾರಣೆ ಅಗತ್ಯವಿರುವುದರಿಂದ ಶಾಸಕರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸಿಐಡಿ ಪೊಲೀಸರು, ಶಾಸಕ ಭೈರತಿ ಬಸವರಾಜ್ ಅವರ ಬಂಧನಕ್ಕೆ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಶಾಸಕರ ಪತ್ತೆಗಾಗಿ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಬೆಂಗಳೂರಿನ ಬೈರತಿಯಲ್ಲಿರುವ ಅವರ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಪ್ರಸ್ತುತ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಅಲ್ಲಿಯೂ ಶಾಸಕರಿಗಾಗಿ ಹುಡುಕಾಟ ನಡೆದಿದೆ. ಇನ್ನು ಯಾವುದೇ ಕ್ಷಣದಲ್ಲಿ ಕೆ.ಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಾಧ್ಯತೆಯಿದೆ.

ಈ ಪ್ರಕರಣ ಸಂಬಂಧ ಈಗಾಗಲೇ A-1 ಜಗದೀಶ್@ ಜಗ್ಗನನ್ನ ವಿಚಾರಣೆಗೊಳಪಡಿಸಲಾಗಿತ್ತು. ಈ ವೇಳೆ MLA ಭೈರತಿ ಬಸವರಾಜ್ ಹೆಸರು ಪದೇ ಪದೇ ಕೇಳಿ ಬಂದಿತ್ತು. ಕೋರ್ಟ್ನಲ್ಲಿ ಜಾಮೀನು ಅರ್ಜಿ & FIR ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. FIRನಲ್ಲಿ ತನ್ನ ವಿರುದ್ಧ ಮಾಡಿರುವ ಆರೋಪ ರದ್ದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಸದ್ಯ ಹೈಕೋರ್ಟ್ ಕೋಕಾ ಆ್ಯಕ್ಟ್ ರದ್ದು ಮಾಡಿ ಜಾಮೀನು ನಿರಾಕರಿಸಿದೆ.
ಇದನ್ನೂ ಓದಿ : ಪ್ರೀತಿಯ ನಾಯಿಗೆ ಸೀಮಂತ ಶಾಸ್ತ್ರ – 50 ಕೆಜಿ ಬಿರಿಯಾನಿ ಊಟ ಹಾಕಿ ಸಂಭ್ರಮಿಸಿದ ತಿಪಟೂರು ಯುವಕರು!







