ಚಿಕ್ಕಬಳ್ಳಾಪುರ : ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.

ಜಕ್ಕೇನೆಹಳ್ಳಿ ಮೂಲದ 25 ವರ್ಷದ ಅಶೋಕ್ ಮತ್ತು ಬಲ್ಕರ್ ವಾಹನ ಸವಾರ ಆಂಧ್ರದ ಸಂಜೀವರಾಯನಪಲ್ಲಿ ನಿವಾಸಿ ನಾಗರಾಜಪ್ಪ ಭೀಕರ ಅಪಘಾತದಲ್ಲಿ ಮೃತಪಟ್ಟವರು.
ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಈ ಸಂಬಂಧ ಮಂಚೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಗುಟ್ಕಾ ವ್ಯಾಪಾರಿ ಕಿಡ್ನ್ಯಾಪ್ ಮಾಡಿ ರಾಬರಿ – 7 ಮಂದಿ ಆರೋಪಿಗಳು ಅರೆಸ್ಟ್!
Author: Btv Kannada
Post Views: 267







