ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ – ಅಧಿಕಾರಿಗಳ ಮೊಬೈಲ್ ವಶಕ್ಕೆ!

ಮಂಡ್ಯ : ಜಿಲ್ಲೆಯ ಉಪವಿಭಾಗಾಧಿಕಾರಿಗಳ (AC) ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿರುವ ಇಬ್ಬರು ಡಿವೈಎಸ್ಪಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕಚೇರಿಗೆ ಪ್ರವೇಶಿಸುತ್ತಿದ್ದಂತೆ ಲೋಕಾಯುಕ್ತ ಅಧಿಕಾರಿಗಳು ಪ್ರತಿಯೊಬ್ಬ ಸಿಬ್ಬಂದಿಯ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಚೇರಿಯ ಎಲ್ಲಾ ವಿಭಾಗಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕರಿಂದ ಬಂದ ಸಾಲು ಸಾಲು ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ರೇಡ್ ಮಾಡಿದ್ದಾರೆ.

ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗಧಿತ ಸಮಯಕ್ಕೆ ಕಚೇರಿಗೆ ಹಾಜರಾಗುತ್ತಿದ್ದಾರೆಯೇ? ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗುತ್ತಿದೆಯೇ ಅಥವಾ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆಯೇ? ಲಂಚದ ರೂಪದಲ್ಲಿ ಹಣ ಪಡೆಯಲಾಗುತ್ತಿದೆಯೇ ಎಂಬ ಅನುಮಾನದ ಮೇಲೆ ಅಧಿಕಾರಿಗಳ ಗೂಗಲ್ ಪೇ, ಫೋನ್ ಪೇ ವಹಿವಾಟುಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಮಾಜಿ ಶಾಸಕ ಚಂದ್ರಶೇಖರ್ & ಪುತ್ರನಿಂದ​ ಗೂಂಡಾಗಿರಿ – ಜಮೀನು ವಿಚಾರಕ್ಕೆ ವ್ಯಕ್ತಿಯ ಮೇಲೆ ಹಲ್ಲೆಗೈದ ಅಪ್ಪ-ಮಗ?

Btv Kannada
Author: Btv Kannada

Read More