ಕಲಬುರಗಿ : ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ!

ಕಲಬುರಗಿ : ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಮೃತ ದುರ್ದೈವಿ.

ನಿನ್ನೆ ರಾತ್ರಿ ಕಲಬುರಗಿ ತಾಲ್ಲೂಕಿನ ನಂದಿಕೂರ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಜ್ಯೋತಿ ಪಾಟೀಲ್ ಅದೇ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಎಂಬುವವರ ಮನೆಗೆ ತೆರಳಿದ್ದರು. ಆ ಸಮಯದಲ್ಲಿ ಮಲ್ಲಿನಾಥ್ ಮನೆಯಲ್ಲಿ ಇರಲಿಲ್ಲ, ಕೇವಲ ಅವರ ಪತ್ನಿ ಮತ್ತು ಮೂವರು ಮಕ್ಕಳು ಇದ್ದು, ಜ್ಯೋತಿ ಅವರು ಮನೆಯ ಬಾಗಿಲು ಬಡಿದಿದ್ದು, ಬಾಗಿಲು ತೆರೆದ ತಕ್ಷಣ ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಡ್ಯ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ – ಅಧಿಕಾರಿಗಳ ಮೊಬೈಲ್ ವಶಕ್ಕೆ!

Btv Kannada
Author: Btv Kannada

Read More