ಹಾವೇರಿ : ಹಾಸ್ಟೆಲ್ ಊಟ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ವಿದ್ಯಾರ್ಥಿನಿಯರು ಹೋಳಿಗೆ, ಅನ್ನ ಸಾಂಬಾರ ಊಟ ಮಾಡಿದ್ದರು. ಬೆಳಗ್ಗೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು ವಾಂತಿಭೇದಿಯಿಂದ ಬಳಲ್ತಿದ್ದರು. ಕೂಡಲೇ ಕೆಲ ವಿದ್ಯಾರ್ಥಿಗಳು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಸ್ಟೆಲ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಹಾವೇರಿಯ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಇಂದು ಭೈರತಿ ಬಸವರಾಜ್ ಜಾಮೀನು ಭವಿಷ್ಯ ನಿರ್ಧಾರ – ಶಾಸಕನಿಗೆ ಬೇಲೋ.. ಜೈಲೋ?
Author: Btv Kannada
Post Views: 236







