ಗದಗ : ಆಕಸ್ಮಿಕ ಅಗ್ನಿ ಅವಘಡದಲ್ಲಿ ಶಾಂತಿ ಚಿತ್ರಮಂದಿರ ಧಗಧಗನೇ ಹೊತ್ತಿ ಉರಿದು ಸುಟ್ಟು ಭಸ್ಮವಾಗಿರುವ ಘಟನೆ ಗದಗ ನಗರದ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಬೆಂಕಿ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೀಠೋಪಕರಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ವಿದ್ಯುತ್ ಶಾರ್ಕ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಬಾಲಿವುಡ್‌ನ ಬಹುನಿರೀಕ್ಷಿತ ಧುರಂದರ್ ಸಿನಿಮಾ ಪ್ರದರ್ಶನ ಆರಂಭವಾಗಬೇಕಿತ್ತು. ಆದರೆ ಸಿನಿಮಾ ಶುರುವಾಗುವ ಕೆಲವೇ ಕ್ಷಣಗಳ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಚಿತ್ರಮಂದಿರವನ್ನು ಆವರಿಸಿಕೊಂಡಿದೆ. ಅದೃಷ್ಟವಶಾತ್ ಪ್ರದರ್ಶನ ಆರಂಭಕ್ಕೂ ಮುನ್ನವೇ ಈ ಘಟನೆ ನಡೆದಿದ್ದರಿಂದ ಪ್ರೇಕ್ಷಕರು ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಮತ್ತೆ ದರ್ಶನ್-ಸುದೀಪ್ ‘ಸ್ಟಾರ್’ ವಾರ್ ಶುರು.. ಕಿಚ್ಚನಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಕ್ಕರ್!







