ಚಾಮರಾಜನಗರಲ್ಲಿ 5 ಹುಲಿಗಳು ಪ್ರತ್ಯಕ್ಷ – ನಿಷೇಧಾಜ್ಞೆ ಜಾರಿ!

ಚಾಮರಾಜನಗರ : ನಂಜೆದೇವಪುರ ಗ್ರಾಮದ ಬಳಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡ್ರೋನ್‌ನಲ್ಲೂ 5 ಹುಲಿಗಳು ಓಡಾಟ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಸಾಕಾನೆಗಳಿಂದಲೂ ಕೂಂಬಿಂಗ್‌ಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ತಿದೆ. ನಿಂತು ಹೋದ ಕ್ವಾರಿಗಳನ್ನೇ ಟೈಗರ್ ಆವಾಸ ಸ್ಥಾನ ಮಾಡಿಕೊಂಡಿದ್ದು, ಹುಲಿಗಳನ್ನ ಡ್ರೈವ್ ಮಾಡೋದು ಬೇಡ ಸೆರೆಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.

ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಹುಲಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಈ ಮಾಹಿತಿಯನ್ನ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಜೊತೆಗೆ ಹುಲಿ ಸೆರೆ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಡ್ರೋನ್‌ ಹಾಗೂ ಪಶುವೈದ್ಯರ ತಂಡ ಕಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯಕ್ಕೆ ಒಂದೇ ಒಂದು ಥರ್ಮಲ್‌ ಈಗಲ್‌ ಡ್ರೋನ್‌ ಇದ್ದು, ಅದರಲ್ಲೇ ಹುಲಿಗಳಿರುವ ಸ್ಥಳ ಪತ್ತೆ ಕಾರ್ಯ ನಡೆಯುತ್ತಿದೆ ಅಂತ ಸಚಿವರಿಗೆ ವಿವರಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಈಶ್ವರ್‌ ಖಂಡ್ರೆ ಶೀಘ್ರವೇ ಹೆಚ್ಚುವರಿ ಡ್ರೋನ್‌, ವಿಶೇಷ ತಂಡ ಕಳಿಸಿಕೊಡೋದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಸುರಂಗ ರಸ್ತೆ ಯೋಜನೆ – ಅತ್ಯಂತ ಕಡಿಮೆ ಬಿಡ್ ಮಾಡಿದ ಅದಾನಿ ಗ್ರೂಪ್!

Btv Kannada
Author: Btv Kannada

Read More