ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ!

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ನಿರ್ಣಾಯಕ ದಿನ. ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಖಾಸಗಿ ದೂರಿನ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಕೇಳಿಬಂದಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಹಾಗಾಗಿ ಪ್ರಕರಣದ ಸಂಪೂರ್ಣ ತನಿಖಾ ವರದಿಯನ್ನು ಸಲ್ಲಿಕೆ ಮಾಡುವಂತೆ ನ್ಯಾಯಾಲಯವು ಲೋಕಾಯುಕ್ತಕ್ಕೆ ಸೂಚಿಸಿತ್ತು. ಲೋಕಾಯುಕ್ತ ಪೊಲೀಸರು ಪೂರ್ಣ ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ವಿಚಾರಣೆಗೆ ಪ್ರಕರಣದ ಸಂಪೂರ್ಣ ಫೈಲ್‌ಗಳನ್ನು ಹಾಜರುಪಡಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. 11 ಅಕ್ರಮಗಳ ಪೈಕಿ ಒಂದರ ತನಿಖೆಯ ವರದಿ ಸಲ್ಲಿಕೆಯಾಗಿದ್ದು, ಇಂದಿನ ವಿಚಾರಣೆ ಬಳಿಕ ಆದೇಶ ಕಾಯ್ದಿರಿಸುವ ಸಾಧ್ಯತೆಯಿದೆ.

ಇದನ್ನೂ ಓದಿ : ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ – ಅಪಘಾತವೆಂದು ಬಿಂಬಿಸಿದ್ದ ಪತಿ ಅರೆಸ್ಟ್​!

Btv Kannada
Author: Btv Kannada

Read More