ಬೀದರ್ : ಗಾಂಧಿಯವರನ್ನ ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ, ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.
ಈ ಬಗ್ಗೆ ಬೀದರ್ನಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನ ಗಾಂಧಿಯವರು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು. ತುರ್ತು ಪರಿಸ್ಥಿತಿ ಜಾರಿ ಮಾಡಿ ಮತ್ತೊಂದು ಸಾರಿ ಗಾಂಧಿಯನ್ನು ಕೊಲೆ ಮಾಡಿದ್ರು. ಗಾಂಧಿ ಮತ್ತು ರಾಮನನ್ನು ಬೇರೆ ಮಾಡಿ ಕಾಂಗ್ರೆಸ್ ಪಾಪದ ಕೆಲಸ ಮಾಡುತ್ತಿದೆ ಎಂದರು.
ರಾಮ ಬೇರೆಯಲ್ಲ ಗಾಂಧಿ ಬೇರೆಯಲ್ಲ ಗಾಂಧಿ ಆತ್ಮ ರಾಮನ ಹೆಸರು ಹೇಳುತ್ತದೆ, ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ ಎಂದು ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ಮೋಹನ್ ಲಾಲ್-ಸಮರ್ಜಿತ್ ಲಂಕೇಶ್ ನಟನೆಯ “ವೃಷಭ” ಡಿ.25ಕ್ಕೆ ತೆರೆಗೆ – ಶುಭ ಹಾರೈಸಿದ ಡಿಸಿಎಂ ಡಿ.ಕೆ ಶಿವಕುಮಾರ್!
Author: Btv Kannada
Post Views: 215







