ವ್ಯಾಪಕ ಭ್ರಷ್ಟಾಚಾರ – ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲರಿಗೆ ದೂರು!

ಬೆಂಗಳೂರು : ಅಬಕಾರಿ ಇ-ಹರಾಜಿನಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

2025-30ನೇ ಸಾಲಿನ ಸಿ.ಎಲ್‌-2A ಮತ್ತು ಸಿ.ಎಲ್-9A ವೈನ್ ಶಾಪ್‌ಗಳ ಇ-ಹರಾಜಿನಲ್ಲಿ ಭಾರಿ ಅವ್ಯವಹಾರ ನಡೆದಿದೆ. ಸಚಿವ ಆರ್.ಬಿ. ತಿಮ್ಮಾಪುರ ಮತ್ತು ಅಧಿಕಾರಿಗಳು ಶಾಮೀಲಾಗಿ, ಪಾರದರ್ಶಕತೆ ಗಾಳಿಗೆ ತೂರಿ ತಮಗೆ ಬೇಕಾದವರಿಗೆ ಅನುಕೂಲ ಮಾಡಿಕೊಡುವ ಮೂಲಕ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿಉಲ್ಲೇಖಿಸಿದ್ದಾರೆ.

ಇ-ಹರಾಜು ಪ್ರಕ್ರಿಯೆ ರದ್ದುಗೊಳಿಸಿ, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಹಲವು ಆರೋಪ ಎದುರಿಸುತ್ತಿರುವ ಸರ್ಕಾರಕ್ಕೆ ಈ ದೂರು ನುಂಗಲಾರದ ತುತ್ತಾಗಿದೆ. ರಾಜ್ಯಪಾಲರು ತನಿಖೆಗೆ ಆದೇಶಿಸಿದರೆ ಸಚಿವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇ-ಹರಾಜು ಅಕ್ರಮದ ಹಿಂದೆ ಯಾರ ಕೈವಾಡವಿದೆ, ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ತನಿಖೆಯ ಬಳಿಕವಷ್ಟೇ ಸತ್ಯ ಹೊರಬರಬೇಕಿದೆ.

ಇದನ್ನೂ ಓದಿ : ನೆಲಮಂಗಲದ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಹಣ ವಸೂಲಿ – ವಿಡಿಯೋ ವೈರಲ್!

Btv Kannada
Author: Btv Kannada

Read More