ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ ಕೆರಳಿಸಿದ ಕೆ.ಎನ್. ರಾಜಣ್ಣ – ಸಿಎಂ ಜೊತೆ ಮಹತ್ವದ ಸಮಾಲೋಚನೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಕೆ.ಎನ್. ರಾಜಣ್ಣ ಅವರ ಸರಣಿ ಭೇಟಿಗಳು ಕುತೂಹಲ ಮೂಡಿಸಿವೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ರಾಜಣ್ಣ, ಸುದೀರ್ಘ ಸಮಾಲೋಚನೆ ನಡೆಸಿದರು.

ಕೆಲವೇ ದಿನಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದ ರಾಜಣ್ಣ, ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ಈ ವೇಳೆ ಸರ್ಕಾರ ಹಾಗೂ ಪಕ್ಷದ ಸಂಘಟನೆ ಕುರಿತು ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಮತಗಳ್ಳತನ ಕುರಿತ ತಮ್ಮ ಹೇಳಿಕೆ ಪಕ್ಷದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಲು ನವೆಂಬರ್ 17ರಂದೇ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದ ರಾಜಣ್ಣ, ಹೈಕಮಾಂಡ್‌ಗೆ ತಮ್ಮ ನಿಲುವು ಮನವರಿಕೆ ಮಾಡಲು ಯತ್ನಿಸಿದ್ದರು.

ಇದನ್ನೂ ಓದಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಹಲ್ಲೆ – ಜ್ಞಾನಭಾರತಿ ಠಾಣೆಯಲ್ಲಿ BNS ಅಡಿ FIR ದಾಖಲು!

Btv Kannada
Author: Btv Kannada

Read More