ಹುಬ್ಬಳ್ಳಿ : ಹುಬ್ಬಳ್ಳಿ ಇನಾಂವೀರಾಪೂರ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಗರ್ಭಿಣಿ ಮಾನ್ಯ ಪಾಟೀಲ್ ಕೊಲೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಅಂತರಜಾತಿ ವಿವಾಹವಾಗಿದ್ದ ಕಾರಣಕ್ಕೆ ಮಾನ್ಯ ಪಾಟೀಲ್ ಅವರನ್ನು ಕುಟುಂಬದವರೇ ಸಂಚು ರೂಪಿಸಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದರು. ಗರ್ಭಿಣಿಯಾಗಿದ್ದರೂ ಲೆಕ್ಕಿಸದೆ ನಡೆದ ಈ ಮರ್ಯಾದಾ ಹತ್ಯೆ ಸಮಾಜದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಮುರಗೇಶ ಚೆನ್ನಣ್ಣನವರ ತಂಡ ತನಿಖೆ ಚುರುಕುಗೊಳಿಸಿದೆ. ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳಿಗಾಗಿ ಹಗಲು-ರಾತ್ರಿ ಕಾರ್ಯಾಚರಣೆ ಕೈಗೊಂಡಿದ್ದಾರೆ, ಹತ್ಯೆಯಲ್ಲಿ ಭಾಗಿಯಾದವರು ಹಾಗೂ ಸಂಚು ರೂಪಿಸಿದವರನ್ನೂ ಪತ್ತೆಹಚ್ಚಿ ಜೈಲಿಗಟ್ಟುತ್ತಿದ್ದಾರೆ.

ಪೊಲೀಸರ ಈ ಕ್ಷಿಪ್ರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ತನಿಖಾ ತಂಡಕ್ಕೆ ಜನರು ಹ್ಯಾಟ್ಸಾಫ್ ಹೇಳುತ್ತಿದ್ದಾರೆ.
ಇದನ್ನೂ ಓದಿ : ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರದ “ನಿಂಗವ್ವ ನಿಂಗವ್ವ” ಸಾಂಗ್ ರಿಲೀಸ್!







