ಚಿತ್ರದುರ್ಗ ಬಸ್ ದುರಂತದಲ್ಲಿ ಮಡಿದವರಿಗೆ ಕಂಬನಿ ಮಿಡಿದ ಸಿಎಂ ಸಿದ್ದು – ಮೃತರಿಗೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ!

ಚಿತ್ರದುರ್ಗದ ಭೀಕರ ಖಾಸಗಿ ಬಸ್ ಅಪಘಾತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ತಕ್ಷಣದ ಆರ್ಥಿಕ ನೆರವು ಘೋಷಿಸುವ ಮೂಲಕ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ 50,000 ಸಾವಿರ ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಘಟನೆಯ ಕುರಿತು ಟ್ವೀಟ್ (X) ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ, ಎಂದು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಬಸ್ ದುರಂತ.. ಪ್ರಧಾನಿ ಮೋದಿ, ಸಿಎಂ ಸಂತಾಪ – ಮೃತರಿಗೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ!

Btv Kannada
Author: Btv Kannada

Read More