ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ಮಹಿಳೆ ಸಾವು!

ಮೈಸೂರು : ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗಳಿಗೆ ಗ್ಯಾಸ್ ತುಂಬುವಾಗ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂಜನಗೂಡು ಮೂಲದ ಮಂಜುಳಾ (45) ಮೃತಪಟ್ಟ ದುರ್ದೈವಿ.

ಸಿಲಿಂಡರ್ ಸ್ಫೋಟಗೊಂಡು ಉತ್ತರ ಪ್ರದೇಶ ಮೂಲದ ವ್ಯಾಪಾರಿ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಈ ಘಟನೆಯಲ್ಲಿ ಗಾಯಗೊಂಡಿದ್ದ ಮಹಿಳೆ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ದಿನವಿಡೀ ಅರಮನೆ, ಮೃಗಾಲಯ ಹಾಗೂ ದೇವರಾಜ ಅರಸು ರಸ್ತೆಯಂತಹ ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಸಲೀಂನ ಸಾವು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸ್ಫೋಟ ಆಕಸ್ಮಿಕವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಉದ್ದೇಶವಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಅಣ್ತಮ್ಮ ಜೋಡೆತ್ತು ಹಾಡಿನೊಂದಿಗೆ ‘ಕೆಡಿ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್!

Btv Kannada
Author: Btv Kannada

Read More