ಚಾಮರಾಜನಗರ : ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಅಮಚವಾಡಿ ನಿವಾಸಿ ಪದ್ದಿ (35) ಗಾಯಗೊಂಡ ವ್ಯಕ್ತಿ. ಕಾಡುಹಂದಿ ಬೇಟೆಗಾಗಿ ಮನೆಯಲ್ಲಿಟ್ಟಿದ್ದ ಸಿಡಿಮದ್ದು ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಪದ್ದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ದು ಕೇಳಿ ಧಾವಿಸಿದ ಗ್ರಾಮಸ್ಥರು ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ
ಬೇಟೆಗಾಗಿ ಸ್ಫೋಟಕ ಸಂಗ್ರಹಿಸುವುದು ಕಾನೂನುಬಾಹಿರವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : 2026ರ ಹೊಸ ವರ್ಷಕ್ಕೆ ಮೂರೇ ದಿನ ಬಾಕಿ ಹಿನ್ನೆಲೆ – ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್!
Author: Btv Kannada
Post Views: 284







