ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಭೀಕರ ದರೋಡೆ ನಡೆದಿದೆ. ಪಟ್ಟಣದ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಐವರು ಸಶಸ್ತ್ರ ದರೋಡೆಕೋರರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ‘ಸ್ಕೈ ಗೋಲ್ಡ್ ಅಂಡ್ ಡೈಮಂಡ್’ ಮಳಿಗೆಗೆ ಬೈಕ್‌ನಲ್ಲಿ ಬಂದ ಐವರು ಮುಸುಕುಧಾರಿಗಳು ಏಕಾಏಕಿ ನುಗ್ಗಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಎರಡು ಕೈಗಳಲ್ಲೂ ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸಿದ ದರೋಡೆಕೋರರು, ಕೆಲವೇ ನಿಮಿಷಗಳಲ್ಲಿ 5 ಕೆಜಿ ಚಿನ್ನ ಹಾಗೂ ವಜ್ರಾಭರಣ ಲೂಟಿ ಮಾಡಿ ಪರಾರಿಯಾಗಿದ್ದಾರೆ.
ದೋಚಲಾದ ಆಭರಣಗಳ ಮೌಲ್ಯ ಅಂದಾಜು 4 ರಿಂದ 5 ಕೋಟಿ ರೂಪಾಯಿ. ದರೋಡೆ ತಡೆಯಲು ಯತ್ನಿಸಿದ ಮ್ಯಾನೇಜರ್ ಅಜ್ಗರ್ ಮೇಲೆ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದು, ಗುರಿ ತಪ್ಪಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪರಾರಿಯಾಗುವ ಅವಸರದಲ್ಲಿ ದರೋಡೆಕೋರನೊಬ್ಬ ತನ್ನ ಹೆಲ್ಮೆಟ್ ಅನ್ನು ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಹುಣಸೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಇದನ್ನೂ ಓದಿ : “ಆಲ್ಫಾ #men love vengeance” ಚಿತ್ರದ ಫಸ್ಟ್ ಸಾಂಗ್ ರಿಲೀಸ್ – ಫೆ.20ಕ್ಕೆ ಸಿನಿಮಾ ತೆರೆಗೆ!







