ಕೌಟುಂಬಿಕ‌ ಕಲಹ – ಗನ್​​ನಿಂದ ತಲೆಗೆ ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ : ಕೌಟುಂಬಿಕ‌ ಕಲಹಕ್ಕೆ ಬೇಸತ್ತು ವ್ಯಕ್ತಿಯೋರ್ವ ಗನ್​​ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಶಿವಶಕ್ತಿನಗರದಲ್ಲಿ ನಡೆದಿದೆ. 

ಖಂಡುರಾಜ್ ದವಲಜಿ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಖಂಡುರಾಜ್ ದವಲಜಿ ರಿವಾಲ್ವರ್​ರನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ – ಹೆಂಡತಿ ಜಗಳವೇ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬಾಕ್ಸ್‌ ಆಫೀಸ್‌ನಲ್ಲಿ ’45’ ಅಬ್ಬರ – ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಸಿನಿಮಾ!

Btv Kannada
Author: Btv Kannada

Read More