ಬೆಂಗಳೂರು : ಬೆಂಗಳೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ದಿಢೀರ್ ರೈಡ್ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ, ಕರ್ತವ್ಯ ಲೋಪದಡಿ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ. ಪ್ರಸ್ತುತ ಈ ಸ್ಥಾನಗಳಿಗೆ ಪ್ರಭಾರ ಇನ್ಸ್‌ಪೆಕ್ಟರ್‌ಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿ, ತೆರವಾದ ಸ್ಥಾನಗಳಿಗೆ ಪ್ರಭಾರ ಅಧಿಕಾರಿಗಳನ್ನು ನೇಮಿಸಲಾಗಿದೆ. ಅವಲಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ರಾಮಕೃಷ್ಣ ಸಸ್ಪೆಂಡ್ ಆದ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ರಾಮಮೂರ್ತಿ ಬಿ ಅವರನ್ನು ನೇಮಿಸಲಾಗಿದೆ, ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್ ಪ್ಲೇಸ್‌ಗೆ ವೆಂಕಟೇಶ್ ಆರ್. ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಮತ್ತು ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್ ಕುಮಾರ್ ಅಮಾನತಿನಿಂದ ತೆರವಾದ ಜಾಗಕ್ಕೆ ಚಂದ್ರಶೇಖರ್ ಅವರನ್ನು ಪ್ರಭಾರ ಠಾಣಾಧಿಕಾರಿಯನ್ನಾಗಿ ಮಾಡಲಾಗಿದೆ.

ಮಹಾರಾಷ್ಟ್ರ ಪೊಲೀಸರ ದಾಳಿ ವೇಳೆ ಸ್ಥಳೀಯ ಪೊಲೀಸರ ಬೇಜವಾಬ್ದಾರಿತನದ ಬಗ್ಗೆ ಬಿಟಿವಿ (BTV) ಸರಣಿ ವರದಿ ಪ್ರಸಾರ ಮಾಡಿತ್ತು. ಇಲಾಖೆಯ ಲೋಪದೋಷಗಳನ್ನು ಒಳಗಿನ ಎತ್ತಿ ತೋರಿಸಿದ ಬೆನ್ನಲ್ಲೇ ಎಚ್ಚೆತ್ತ ಐಜಿಪಿ ಸೀಮಂತ್ ಕುಮಾರ್ ಸಿಂಗ್, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ. ತಪ್ಪು ಮಾಡಿದವರಿಗೆ ಇಲಾಖೆಯಲ್ಲಿ ಜಾಗವಿಲ್ಲ ಎಂಬ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.
ಹೂಡಿಕೆ ವಂಚನೆ ಪ್ರಕರಣದ ತನಿಖೆಗೆ ಬಂದಿದ್ದ ಮಹಾರಾಷ್ಟ್ರ ಪೊಲೀಸರ ಕಾನೂನುಬಾಹಿರ ಚಟುವಟಿಕೆಗೆ ಸ್ಥಳೀಯ ಇನ್ಸ್‌ಪೆಕ್ಟರ್‌ಗಳು ಸಹಕರಿಸಿದ ಗಂಭೀರ ಆರೋಪ ಕೇಳಿಬಂದಿತ್ತು. ಈ ಘಟನೆಯಿಂದ ಇಲಾಖೆಯ ಘನತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಮೂಲಕ ಈ ಸರ್ಜರಿ ನಡೆಸಲಾಗಿದೆ.

ಇದನ್ನೂ ಓದಿ : ಕೌಟುಂಬಿಕ ಕಲಹ – ಗನ್ನಿಂದ ತಲೆಗೆ ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ!







