ರಾಯಬಾಗ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲಸಿರಗುರ ಬಸ್ ನಿಲ್ದಾಣದ ಬಳಿ ಸಿಮೆಂಟ್ ಕಂಟೇನರ್ ಲಾರಿ ಪಲ್ಟಿಯಾಗಿ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ಸಮೀರವಾಡಿಗೆ ಹೊರಟಿದ್ದ ಸಿಮೆಂಟ್ ಲಾರಿ, ಹಾಲಸಿರಗುರ ಬಸ್ ನಿಲ್ದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್‌ಗಾಗಿ ಕಾಯುತ್ತಿದ್ದ ಮೂವರು ವಿದ್ಯಾರ್ಥಿಗಳು ಲಾರಿ ಅಡಿ ಸಿಲುಕಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಲಾರಿ ಅಡಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಜೆಸಿಬಿ ಮತ್ತು ಕ್ರೇನ್‌ಗಳ ಸಹಾಯದಿಂದ ಹೊರತೆಗೆಯಲಾಯಿತು. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ 6 ಮಂದಿ ಆರೋಪಿಗಳು ಅರೆಸ್ಟ್!







