ಕಲಬುರಗಿ : ಅಟ್ರಾಸಿಟಿ ಪ್ರಕರಣದಲ್ಲಿ ಸಹಕರಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಲಬುರಗಿ ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದೂರುದಾರರಾದ ನವೀನ್ ಎಂಬುವವರ ಮೇಲೆ ದಾಖಲಾಗಿದ್ದ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಹಕರಿಸಲು ರಾಜ ಮಹೇಂದ್ರ ಅವರು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರ ಮಾರ್ಗದರ್ಶನದಂತೆ, ಇಂದು ಮೊದಲ ಕಂತಿನ ರೂಪದಲ್ಲಿ 25 ಸಾವಿರ ರೂಪಾಯಿ ಮುಂಗಡ ಹಣವನ್ನು ಪಡೆಯುತ್ತಿದ್ದಾಗ ಹೈಕೋರ್ಟ್ ಮುಂಭಾಗದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಜ ಮಹೇಂದ್ರ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್.ಪಿ. ಸಿದ್ದರಾಜು ಹಾಗೂ ಡಿವೈಎಸ್ಪಿ ಶೀಲವಂತ ಅವರ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪಿಜಿಯಲ್ಲಿ ಸಿಲಿಂಡರ್ ಸ್ಫೋಟ – ಓರ್ವ ಯುವಕ ಸಾವು, ಮೂವರು ಗಂಭೀರ!







