ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ವಿನಾಯಕ ಕಲ್ಯಾಣ ಮಂಟಪದ ಬಳಿ ಗ್ಯಾಸ್ ಗೀಸರ್ ಸೋರಿಕೆಯಿಂದಾಗಿ ಬಿ.ಎಸ್ಸಿ ವಿದ್ಯಾರ್ಥಿನಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಯುವತಿ ಡಾನ್ ಬೋಸ್ಕೋ ಡಿಗ್ರಿ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ನೂತನ. ಎಂದಿನಂತೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ಸಂಪೂರ್ಣವಾಗಿ ಕಿಟಕಿ-ಬಾಗಿಲು ಮುಚ್ಚಿದ್ದರಿಂದ ಬಾತ್‌ರೂಮ್‌ನಲ್ಲಿ ಆಮ್ಲಜನಕದ ಕೊರತೆಯುಂಟಾಗಿದೆ. ಪರಿಣಾಮ ಅನಿಲ ಆವರಿಸಿ ನೂತನ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಮಗಳು ಸ್ನಾನಕ್ಕೆ ಹೋಗಿ ದೀರ್ಘಕಾಲದವರೆಗೆ ಬಾರದಿರುವುದನ್ನು ಕಂಡು ಆತಂಕಗೊಂಡ ಪೋಷಕರು ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ‘ರಕ್ಕಸಪುರದೊಳ್’ ಟ್ರೈಲರ್ ಔಟ್ – ರಾಜ್ ಬಿ. ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್!







