ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್ – ED ಕೇಸ್​ನಲ್ಲಿ ಜಾಮೀನು ಮಂಜೂರು!

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ 4 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ (PMLA) ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದ ವೀರೇಂದ್ರ ಪಪ್ಪಿ, ಕಳೆದ ನಾಲ್ಕು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಸುದೀರ್ಘ ವಿಚಾರಣೆ ಮತ್ತು ವಾದ-ಪ್ರತಿವಾದಗಳ ನಂತರ, ನ್ಯಾಯಾಲಯ ಜಾಮೀನು ನೀಡಿದೆ.

ನ್ಯಾಯಾಲಯವು ಶಾಸಕರಿಗೆ ಜಾಮೀನು ನೀಡುವಾಗ ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿದೆ. 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಲಾಗಿದೆ. ನ್ಯಾಯಾಲಯದ ಅನುಮತಿ ಇಲ್ಲದೆ ತಮ್ಮ ಕಾರ್ಯಕ್ಷೇತ್ರ ಅಥವಾ ನಿಗದಿತ ವ್ಯಾಪ್ತಿಯನ್ನು ಬಿಟ್ಟು ಹೊರಹೋಗುವಂತಿಲ್ಲ. ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಬಾರದು.

ಇದನ್ನೂ ಓದಿ : ಗ್ಯಾಸ್ ಗೀಸರ್ ಸೋರಿಕೆಯಿಂದ ಬಿ.ಎಸ್ಸಿ ವಿದ್ಯಾರ್ಥಿನಿ ಉಸಿರುಗಟ್ಟಿ ಸಾವು!

Btv Kannada
Author: Btv Kannada