ಆನೇಕಲ್ : ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ನಲ್ಲಿ ನಡೆದಿದೆ.

ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ಬಸ್‌ಗಳು ಜಖಂಗೊಂಡಿವೆ.

ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಪರಿಣಾಮ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ನ್ಯೂ ಇಯರ್ ಸೆಲೆಬ್ರೇಷನ್ಗೆ ಕೌಂಟ್ ಡೌನ್ – ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳಿಗೆ ನಿಷೇಧ!







