ಚಿತ್ರದುರ್ಗ : ತಾಯಿಯಿಂದ ಹಣ ನೀಡಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಮಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಸೂಸೈಡ್ಗೆ ಯತ್ನಿಸಿದ ಯುವಕ.

ಮಹೇಶ್ ತಾಯಿಗೆ ಎರಡು ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದ. ತಾಯಿ ಬ್ಯಾಂಕಿಗೆ ತೆರಳಿ ಹಣ ಪಡೆಯಲು ವಿಳಂಬವಾಗಿತ್ತು. ಹಾಗಾಗಿ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಆತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಸ್ಥಿತಿಯ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈಗಾಗಲೇ ಮಹೇಶ್ ತಾಯಿಯಿಂದ ನಾಲ್ಕು ಲಕ್ಷ ರೂ. ಪಡೆದು ಖರ್ಚು ಮಾಡಿದ್ದ ಆರೋಪ ಕೇಳಿಬಂದಿದೆ. ಆಸ್ಪತ್ರೆ ಆವರಣದಲ್ಲಿ ತಾಯಿಯ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ಲಕ್ಷ್ಮಿಪುತ್ರ’ನಿಗೆ ಸಿಕ್ಕರು ನಾಯಕಿ – ಚಿಕ್ಕಣ್ಣನಿಗೆ ಜೋಡಿ ಯಾರು?







