ಮಂಡ್ಯ : ವಿಳಾಸ ಕೇಳುವ ನೆಪದಲ್ಲಿ ಇಬ್ಬರು ಖತರ್ನಾಕ್ ಕಳ್ಳರು ಮಹಿಳೆಯ ಸರಗಳ್ಳತನಕ್ಕೆ ಯತ್ನಿಸಿದ ಘಟನೆ ಮದ್ದೂರು ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಮಹಿಳೆಯ ಸರಕಿತ್ತು ಪರಾರಿಗೆ ಯತ್ನಿಸಿದಾಗ ಇಬ್ಬರು ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಬೆಸಗರಳ್ಳಿ ಪೊಲೀಸರು ಖದೀಮರನ್ನು ಅರೆಸ್ಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ಗ್ರಾಮದ ಬಸ್ ನಿಲ್ದಾಣದಲ್ಲಿ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಇಬ್ಬರು ಕಿಡಿಗೇಡಿಗಳು ಸರಕಿತ್ತು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಸರಗಳ್ಳರನ್ನು ಹಿಡಿದು ಬೆಸಗರಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಸರಗಳ್ಳತನ ಯತ್ನದ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿದ್ದಾರೆ. ಪೊಲೀಸರು ಮಹಿಳೆಯಿಂದ ಮಾಹಿತಿ ಪಡೆದು ಬಂಧಿತರಿಬ್ಬರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕ್ತಿದ್ದು, ಈ ಸಂಬಂಧ ಬೆಸಗರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಚಿತ್ರದ ಕಿಕ್ ಏರಿಸುವ ‘ಅಸಲಿ ಸಿನಿಮಾ’ ಸಾಂಗ್ ರಿಲೀಸ್!







