ಬೆಂಗಳೂರು : ಸಿಲಿಕಾನ್ ಸಿಟಿಯ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಸಂಜೆ ವೇಳೆ ಮಳೆ ಆರಂಭವಾಗಿದ್ದು, ಮಲ್ಲೇಶ್ವರಂ, ಯಶವಂತಪುರ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯ, ವಿವಿ ಪುರಂ ಸೇರಿದಂತೆ ಅನೇಕ ಕಡೆಗಳಲ್ಲಿ ಭರ್ಜರಿ ಮಳೆಯಾಗಿದೆ.
ಏಕಾಏಕಿ ಸುರಿಯುತ್ತಿರುವ ಮಳೆಗೆ ಆಫೀಸ್ನಿಂದ ಮನೆಗೆ ತೆರಳುವವರಿಗೆ ವರುಣ ದೇವ ತೊಂದರೆಯನ್ನುಂಟು ಮಾಡಿದ್ದಾನೆ. ರಸ್ತೆಗಳಲ್ಲಿ ನೀರು ನಿಂತು ಅಲ್ಲಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ.
ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14 ರಿಂದ ಏಪ್ರಿಲ್ 20ರವರೆಗೆ ಮಳೆ ಬೀಳಲಿದೆ ಎಂದು ಐಎಂಡಿ ತಿಳಿಸಿದೆ. ರಾಜ್ಯದೆಲ್ಲೆಡೆ ಒಂದು ವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ನಗರ ಮಾತ್ರವಲ್ಲದೆ ಕೊಡಗು, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಗುಲ್ಬರ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ರಾಮನಗರ ಮತ್ತು ಚಾಮರಾಜನಗರ ಕಡೆಗಳೆಲ್ಲಾ ಇಂದು ಮಳೆ ಬೀಳಲಿದೆ.
ಇದನ್ನೂ ಓದಿ : ಡೀಸೆಲ್ ದರ ಏರಿಸಿದ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರ ಬಿಗ್ ಶಾಕ್ – ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ!
