ಕೊನೆಗೂ ಸೋಲಿನ ಸುಳಿಯಿಂದ ಹೊರಬಂದ CSK – ಲಕ್ನೋ ವಿರುದ್ಧ ಧೋನಿ ಪಡೆಗೆ ರೋಚಕ ಜಯ!

ಉತ್ತರ ಪ್ರದೇಶದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2025ರ 30ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರಿನಲ್ಲಿಯೇ ಸೋಲಿಸಿದೆ. ಈ ಮೂಲಕ ಸೋಲಿನ ಸುಳಿಗೆ ಸಿಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಸೀಸನ್​ 18ರಲ್ಲಿ ಎರಡನೇ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಲಕ್ನೋ ನೀಡಿದ 167 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಪರ ಆರಂಭಿಕ ಆಟಗಾರ ಶೈಕ್ ರಶೀದ್ 27, ರಚಿನ್ ರವೀಂದ್ರ 37 ರನ್ ಗಳಿಸಿ ಔಟಾದರು. ಬಳಿಕ ಬಂದ ರಾಹುಲ್ ತ್ರಿಪಾಠಿ ಕೇವಲ 9 ರನ್ ಗಳಿಗೆ ರವಿ ಬಿಷ್ಣೋಯಿ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ರವೀಂದ್ರ ಜಡೇಜ ಕೇವಲ 7 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಈ ಸಂದರ್ಭದಲ್ಲಿ ಶಿವಂ ದುಬೆ ಅಜೇಯ 43, ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 26 ರನ್ ಗಳ ನೆರವಿನಿಂದ ಚೆನ್ನೈ 19.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಇದನ್ನೂ ಓದಿ : ಐಷಾರಾಮಿ ಕಾರು ಖರೀದಿಸಿದ ನಟ ರಿಷಬ್‌ ಶೆಟ್ಟಿ.. ಇದರ ಬೆಲೆ ಎಷ್ಟು ಕೋಟಿ ಗೊತ್ತಾ?

Btv Kannada
Author: Btv Kannada

Read More