ಬೆಂಗಳೂರು : ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡ ನಟಿ ವೈಷ್ಣವಿ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಷ್ಟು ದಿನ ಸಿಂಗಲ್ ಆಗಿದ್ದ ವೈಷ್ಣವಿ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹೌದು.. ನಿನ್ನೆ ಅಂದರೆ ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉದ್ಯಮಿ ಅಕಾಯ್ ಹಾಗೂ ವೈಷ್ಣವಿ ಗೌಡ ಗುರು ಹಿರಿಯರ ಸಮ್ಮುಖದಲ್ಲಿ ಒಬ್ಬರೊಬ್ಬರು ಉಂಗುರ ಬದಲಾಯಿಸಿಕೊಂಡಿದ್ದಾರೆ.
ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥದ ವಿಡಿಯೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಲ್ಲದೇ ಅದ್ಧೂರಿಯಾಗಿ ನಿಶ್ಚಿತಾರ್ಥದಲ್ಲಿ ವೈಷ್ಣವಿ ಗೌಡ ಥೇಟ್ ಅಪ್ಸರೆಯಂತೆ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥದ ಸಮಾರಂಭದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟಿ ಅಮೂಲ್ಯ ಗೌಡ ದಂಪತಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಕಿರುತೆರೆ ಸ್ಟಾರ್ ನಟ ನಟಿಯರು ಭಾಗಿಯಾಗಿದ್ದು ಇನ್ನೂ ವಿಶೇಷವಾಗಿತ್ತು. ಇದೀಗ ವೈಷ್ಣವಿ ಹಾಗೂ ಅಕಾಯ್ಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿದೆ.
ಕೆಲವೇ ತಿಂಗಳಲ್ಲಿ ವೈಷ್ಣವಿ ಗೌಡ ಮತ್ತು ಅಕಾಯ್ ಮದುವೆ ನಡೆಯಲಿದೆ ಎನ್ನಲಾಗಿದೆ. ನಿಶ್ಚಿತಾರ್ಥದ ವಿಷಯವನ್ನು ವೈಷ್ಣವಿ ಗುಟ್ಟಾಗಿ ಇಟ್ಟಿದ್ದು, ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.
ಸದ್ಯ ನಟಿ ವೈಷ್ಣವಿ ಸೀತಾ ರಾಮ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಸೀರಿಯಲ್ನಲ್ಲಿ ನಟಿ ವೈಷ್ಣವಿ ಗೌಡ ಸೀತಾ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಲ್ಲದೇ ಅಭಿಮಾನಿಗಳು ವೈಷ್ಣವಿ ಗೌಡ ಅವರ ನಟನೆಗೆ ಫಿದಾ ಆಗಿದ್ದಾರೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಮಧ್ಯರಾತ್ರಿಯಿಂದ್ಲೇ ಲಾರಿ ಮುಷ್ಕರ ಶುರು – ಅಗತ್ಯ ಸೇವೆಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ!
