ರಿಯಲ್ ಸ್ಟಾರ್ ಉಪೇಂದ್ರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ಕಾಶ್ಮೀರದಲ್ಲಿ ಚಿತ್ರೀಕರಣ!

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಆಯುಷ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ಕಾಶ್ಮೀರದಲ್ಲೇ ಮುಹೂರ್ತ ನೆರವೇರಿದ್ದು, ಅಲ್ಲಿಯೇ 25 ದಿನಗಳ ಮೊದಲ ಹಂತದ ಚಿತ್ರೀಕರಣ ಕೂಡ ನಡೆದಿದೆ. ನಾಯಕನಾಗಲೂ ಬೇಕಾಗಿರುವ ಪೂರ್ವ ತಯಾರಿಗಳನ್ನೆಲ್ಲಾ ಮಾಡಿಕೊಂಡಿರುವ ಆಯುಷ್ ಮಾಡಿಕೊಂಡಿದ್ದಾರೆ.

ರಾಕಿಂಗ್‌ ಸ್ಟಾರ್ ಯಶ್ ಅಭಿನಯದ “ಮೊದಲಾಸಲ” ಚಿತ್ರವನ್ನು ನಿರ್ದೇಶಿಸಿದ್ದ ಪುರುಷೋತ್ತಮ ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಶ್ರೀಕಲ್ಪವೃಕ್ಷ ಮೂವೀ ಮೇಕರ್ಸ್ ಲಾಂಛನದಲ್ಲಿ ಅಭಿಷೇಕ್ ಎನ್ ಸಿರಿವಂತ್ ಈ ನೂತನ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಅಭಿಷೇಕ್ ಎನ್ ಸಿರಿವಂತ್ ಅವರ ಚೊಚ್ಚಲ ನಿರ್ಮಾಣದ ಚಿತ್ರ. ಖ್ಯಾತ ಛಾಯಾಗ್ರಾಹಕ ಎಚ್ ಸಿ ವೇಣು ಅವರ ಛಾಯಾಗ್ರಹಣ ಹಾಗೂ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಉಳಿದ ತಾರಾಬಳಗ ಮತ್ತು ತಂತ್ರಜ್ಞರ ಕುರಿತು ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಮಗನ ಮೊದಲ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಅವರು ಉಪಸ್ಥಿತರಿದ್ದು, ಆಯುಷ್ ಗೆ ಮಾರ್ಗದರ್ಶನ ನೀಡಿದ್ದಾರೆ. ವಿಶೇಷವಾಗಿ ಪ್ರಿಯಾಂಕ ಉಪೇಂದ್ರ ಅವರು ನಿರ್ಮಾಣದ ಅಂಶಗಳ ಕುರಿತು ಗಮನ ಹರಿಸುವುದರ ಜೊತೆಗೆ, ವಿವಿಧ ವಿಭಾಗಗಳಲ್ಲಿ ಸಹಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ : ಕಲರ್ಸ್‌ ಕನ್ನಡದ ‘ಭಾರ್ಗವಿ LLB’ಯಲ್ಲಿ ಮಹಾ ತಿರುವು – ಚಿತೆಯ ಮುಂದೆ ಭೀಷ್ಮ ಪ್ರತಿಜ್ಞೆ ಮಾಡಿದ ಭಾರ್ಗವಿ, ವಕೀಲಿ ವೃತ್ತಿಗೆ ವಿದಾಯ!

Btv Kannada
Author: Btv Kannada

Read More