ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ “ಬಿ” ವರದಿಗೆ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಬಿ ರಿಪೋರ್ಟ್ ಬಗ್ಗೆ ಸದ್ಯ ಯಾವುದೇ ಆದೇಶ ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ.
ತನಿಖೆ ಮುಂದುವರಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದ್ದು, ಅಂತಿಮ ವರದಿ ಬಂದ ಬಳಿಕವೇ ಬಿ ರಿಪೋರ್ಟ್ ಬಗ್ಗೆ ಆದೇಶ ನೀಡುವುದಾಗಿ ಪೀಠ ಹೇಳಿದೆ. ಮುಂದಿನ ವಿಚಾರಣೆಯನ್ನು ಮೇ.7ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ : ಹುಬ್ಬಳ್ಳಿ ಕಾಮುಕನ ಎನ್ಕೌಂಟರ್ ಕೇಸ್ – ಆರೋಪಿ ಮೃತದೇಹ ಶವಸಂಸ್ಕಾರಕ್ಕೆ ತಡೆ ಕೋರಿ ಹೈಕೋರ್ಟ್ಗೆ ಮನವಿ!

Author: Btv Kannada
Post Views: 578